ಚಿಕ್ಕಬಳ್ಳಾಪುರ : ನೋಡ ನೋಡುತ್ತಿದ್ದಂತೆ ಆಪ್ಟಿಕಲ್ ಅಂಗಡಿಯೊಂದು ಬೆಂಕಿಗಾಹುತಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದ ಬಿಎಚ್ ರಸ್ತೆಯಲ್ಲಿ ನಡೆದಿದೆ..
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಎಂಎಸ್ ಆಪ್ಟಿಕಲ್ ಅಂಗಡಿ ಸುಟ್ಟು ಕರಕಲಾಗಿದೆ . ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ..
ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಕನ್ನಡಕದ ಪರಿಕರಗಳು ಸುಟ್ಟು ಭಸ್ಮವಾಗಿದೆ.. ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..







