ಬಳ್ಳಾರಿ : ಅಗ್ನಿ ಅವಘಡ ( Fire Accident ) ಸಂಭವಿಸಿ ನಾಲ್ಕು ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿಯ ಕೂಡ್ಲಿಗಿಯಲ್ಲಿ ನಡೆದಿದೆ.
ಕೂಡ್ಲಿಗಿ ಪಟ್ಟಣದ 10 ನೇ ವಾರ್ಡ್ ನಲ್ಲಿ ಕಡ್ಡಿ ಮಂಜಣ್ಣ ಎಂಬುವರ ಮನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ (Fire Accident) ಸಂಭವಿಸಿದೆ.
ಪರಿಣಾಮ ಮನೆಯಲ್ಲಿದ್ದ ನಾಲ್ಕು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಇನ್ನು ಅಗ್ನಿ ಅವಘಡಕ್ಕೆ ಕಾರಣ ಏನೆಂಬುದು ಸೂಕ್ತ ಮಾಹಿತಿ ಲಭ್ಯವಾಗಿಲ್ಲ.
ಇದನ್ನೂ ಓದಿ : ಬಳ್ಳಾರಿಯಲ್ಲಿ ಉತ್ತಮ ಮಳೆ : ಪಾಳು ಬಿದ್ದ ಬೋರ್ ವೆಲ್ ನಿಂದ ಉಕ್ಕಿದ ನೀರು
ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ಇನ್ನು ಸ್ಥಳಕ್ಕೆ ಪೊಲೀಸರು, ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









