ಗಾಂಧಿನಗರ: ಸೂರತ್ನ (Surat) ಕೆಮಿಕಲ್ ಫ್ಯಾಕ್ಟರಿಯಲ್ಲಿ (Chemical Factory) ಅಗ್ನಿ ಅವಘಡ ಸಂಭವಿಸಿದ್ದು, 7 ಶವ ಪತ್ತೆಯಾಗಿದೆ.
24 ಕಾರ್ಮಿಕರು ಗಾಯಗೊಂಡಿದ್ದು, ಒಂದು ದಿನದ ನಂತರ 7 ಶವ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಚಿನ್ ಜಿಐಡಿಸಿ ಕೈಗಾರಿಕಾ ಪ್ರದೇಶದಲ್ಲಿ ನೆಲೆಗೊಂಡಿರುವ ಈಥರ್ ಇಂಡಸ್ಟ್ರೀಸ್ನಲ್ಲಿ ಈ ಘಟನೆ ನಡೆದಿದೆ.
ಈ ಹಿಂದೆ ಏಳು ಮಂದಿ ಸ್ಥಳದಿಂದ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ವರದಿ ಮಾಡಿದ್ದರು. 24 ವ್ಯಕ್ತಿಗಳನ್ನು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಘಟನೆಯಲ್ಲಿ ಸುಟ್ಟ ಗಾಯಗಳಾಗಿರುವ ಕಾರ್ಮಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ.