ಕೇಂದ್ರ ಗೃಹ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.
ದೆಹಲಿಯ ರೈಸಿನಾ ಹಿಲ್ಸ್ ಪ್ರದೇಶದಲ್ಲಿರುವ ನಾರ್ತ್ ಬ್ಲಾಕ್ ನ ಎರಡನೇ ಮಹಡಿಯಲ್ಲಿಯೇ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಹಾಗೂ ಗಾಯಗಳಾದ ಕುರಿತು ವರದಿಯಾಗಿಲ್ಲ. ಅಗ್ನಿಶಾಮಕ ಟೆಂಡರ್ ಗಳ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರಲಾಗಿದೆ.
ಅಗ್ನಿ ಅವಘಡ ನಡೆದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಚೇರಿಯಲ್ಲಿ ಇರಲಿಲ್ಲ. ಹಲವು ಉನ್ನತ ಅಧಿಕಾರಿಗಳು ಹಾಜರಿದ್ದರು ಎಂದು ಮೂಲಗಳು ಹೇಳಿವೆ. ಆದರೆ, ಕಂಪ್ಯೂಟರ್ ಸೇರಿದಂತೆ ಹಲವು ದಾಖಲೆಗಳು ಆಹುತಿಯಾಗಿವೆ ಎನ್ನಲಾಗುತ್ತಿದೆ.