ಮೆಜೆಸ್ಟಿಕ್ (Mejestic) ಹತ್ತಿರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ (KSR) ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ (Udyan Express Train) ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ತಾಂತ್ರಿಕ ಸಮಸ್ಯೆಯಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಂಕಿಯು ರೈಲಿನ ಎರಡು ಕೋಚ್ಗಳಿಗೆ ಆವರಿಸಿದೆ. ಇದನ್ನು ಕಂಡು ಪ್ರಯಾಣಿಕರು ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಘಟನೆಯಿಂದಾಗಿ ದಟ್ಟ ಹೊಗೆ ಆವರಿಸಿದೆ. ರೈಲ್ವೆ ನಿಲ್ದಾಣ , ಮೆಜೆಸ್ಟಿಕ್ ಬಸ್ ನಿಲ್ದಾಣದವರೆಗೆ ಹೊಗೆ ಆವರಿಸಿತ್ತು.