ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಪಕ್ಕದಲ್ಲಿಯೇ ಅಗ್ನಿ ಅವಘಡ ನಡೆದಿರುವ ಘಟನೆ ನಡೆದಿದೆ.
ನಗರದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆದಿತ್ತು. ಲಾಲ್ ಬಾಗ್ ಸರ್ಕಲ್, ಸಾರಿಗೆ ಬಸ್ ಸ್ಟಾಂಡ್ ಮುಂಭಾಗದಲ್ಲಿರುವ ಭಾರತ್ ಮಾಲ್ ಹತ್ತಿರದ ಮೆಡಿಕಲ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ಅವಘಡ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋನಿಂದ ಕೇವಲ 50 ಮೀಟರ್ ದೂರದಲ್ಲಿದೆ. ಹೀಗಾಗಿ ಸ್ಥಳದಲ್ಲಿ ಕೆಲ ಹೊತ್ತು ಆತಂಕ ಮನೆ ಮಾಡಿತ್ತು. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.