ನವದೆಹಲಿ: ಎರಡು ಹಂತಸ್ತಿನ ಪ್ಲಾಸ್ಟಿಕ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಭಾರೀ ಪ್ರಮಾಣದ ನಷ್ಟ ಸಂಭವಿಸಿರುವ ಘಟನೆ ದೆಹಲಿಯ ಶಹ್ಜಾದಾಬಾಗ್ ಪ್ರದೇಶದಲ್ಲಿ ನಡೆದಿದೆ.
ಉತ್ತರ ದೆಹಲಿಯ ಶಹ್ಜಾದಾಬಾಗ್ ಪ್ರದೇಶದ ಇಂಡೋರ್‍ಲೋಕ್‍ನಲ್ಲಿ ಇಂದು ಬೆಳಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ 9 ಅಗ್ನಿಶಾಮಕ ದಳದ ತಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
https://youtu.be/lwfLpyPrcX0








