ಬೆಂಗಳೂರು : ಬಿಬಿಎಂಪಿ (BBMP) ಮುಖ್ಯ ಕಚೇರಿಯಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಎಂಜಿನಿಯರ್ ಶಿವಕುಮಾರ್ (Shivakumar) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಶಿವಕುಮಾರ್ ಗುಣ ನಿಯಂತ್ರಣ ವಿಭಾಗದದಲ್ಲಿ ಮುಖ್ಯ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಬೆಂಕಿ ಅವಘಡದ ವೇಳೆ ಎಲ್ಲರನ್ನೂ ರಕ್ಷಿಸುವಾಗ ವಿಷಾನಿಲ ದೇಹದ ಶ್ವಾಸಕೋಶಕ್ಕೆ ಹೋಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬಿಬಿಎಂಪಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಹೊತ್ತಿ ಉರಿದ ಬೆಂಕಿಯಿಂದಾಗಿ 9 ಜನ ಬಿಬಿಎಂಪಿ ನೌಕರರಿಗೆ ತೀವ್ರ ಗಾಯಗಳಾಗಿದ್ದವು. ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಬೆಂಕಿ ಅವಘಡದಿಂದಾಗಿ ಗಂಭೀರ ಗಾಯಗೊಂಡಿದ್ದ ಬಿಬಿಎಂಪಿ ಮುಖ್ಯ ಇಂಜನಿಯರ್ ಶಿವಕುಮಾರ್ ಸಾವನ್ನಪ್ಪಿದ್ದಾರೆ.
ಶಿವಕುಮಾರ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.