ಸೋಪಾ ಸೆಟ್ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾಕಷ್ಟು ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿಯೇ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪರಿಣಾಮ ಅಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ಹತ್ತಿ ಸೇರಿದಂತೆ ಮತ್ತಿತರ ವಸ್ತುಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.