ತೆಲಂಗಾಣ : ಶ್ರೀಶೈಲಂ ಹೈಡಲ್ ಪವರ್ ಯೂನಿಟ್ ನಲ್ಲಿ ನಡೆದ ಬೆಂಕಿ ಅವಘಡದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಮಧ್ಯೆ ರಾತ್ರಿ ಶ್ರೀಶೈಲಂ ಜಲವಿದ್ಯುತ್ ಕೇಂದ್ರದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಇದರಲ್ಲಿ 9 ಮಂದಿ ಸಿಲುಕಿಕೊಂಡಿದ್ದರು. ಇದೀಗ ಆರು ಮಂದಿ ಮೃತಪಟ್ಟಿದ್ದು, ಅವರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ವರದಿಯಾಗಿದೆ. ಉಳಿದ ಮೂವರಿಗಾಗಿ ಹುಡುಕಾಟ ಮುಂದುವರೆದಿದೆ.
ಶಾರ್ಟ್ ಸಕ್ರ್ಯೂಟ್ ನಿಂದಾಗಿ ಪ್ಯಾನೆಲ್ ಬೋರ್ಡ್ ಗೆ ಬೆಂಕಿ ತಗುಲಿ, ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ದುರಂತದ ವೇಳೆ ಕೆನೆಲ್ ನಲ್ಲಿದ್ದ 15 ಮಂದಿ ಸುರಂಗದಿಂದ ಹೊರಗೆ ಓಡಿ, ಬಚಾವಾಗಿದ್ದರು. ನಂತರ ಕೆಲವರನ್ನು ರಕ್ಷಣೆ ಮಾಡಲಾಗಿತ್ತು. ಕೆನೆಲ್ ನಲ್ಲಿ ದಟ್ಟ ಹೊಗೆ ತುಂಬಿಕೊಂಡಿದ್ದರಿಂದ ಉಳಿದ 9 ಮಂದಿಯ ರಕ್ಷಣಾ ಕಾರ್ಯಾಚರಣೆ ಸುಲಭವಾಗಿರಲಿಲ್ಲ.
ಇಂದು ಮುಂಜಾನೆಯಿಂದಲೇ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಎನ್ ಡಿಆರ್ ಎಫ್ ಸಿಬ್ಬಂದಿ ಕೂಡ ರಕ್ಷಣಾ ಕಾರ್ಯದಲ್ಲಿ ಕೈಜೋಡಿಸಿದ್ದಾರೆ.