ದೆಹಲಿಯಲ್ಲಿ ಅಗ್ನಿವಘಡ | 30 ಗುಡಿಸಲುಗಳು ಭಸ್ಮ – Saaksha Tv
ದೆಹಲಿ: ಗುಡಿಸಲುಗಳಿಗೆ ಬೆಂಕಿ ಬಿದ್ದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ದೆಹಲಿಯ ಈಶಾನ್ಯ ಗೋಕುಲಪುರಿ ಪ್ರದೇಶದಲ್ಲಿ ನಡೆದಿದೆ.
ಗೋಕುಲ್ಪುರಿ ಗ್ರಾಮದ ಪಿಲ್ಲರ್ ಸಂಖ್ಯೆ 12 ರ ಬಳಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಹದಿಮೂರು ಅಗ್ನಿಶಾಮಕ ವಾಹನಗಳು ಬೆಂಕೆಯನ್ನು ನಂದಿಸಲು ಯಶಸ್ವಿಯಾಗಿದ್ದಾವೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ಈಶಾನ್ಯ) ದೇವೇಶ್ ಕುಮಾರ್ ಮಹ್ಲಾ ಹೇಳಿದ್ದಾರೆ.
ಅಗ್ನಿ ಅವಘಡದಲ್ಲಿ 60 ಗುಡಿಸಲುಗಳಗೆ ಬೆಂಕಿ ತಗುಲಿದ್ದು, 30 ಗುಡಿಸಲು ಬೆಂಕಿಯಲ್ಲಿ ಸುಟ್ಟುಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಟ್ವಿಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೆಳಿಗ್ಗೆಯೇ ದುಃಖದ ಸುದ್ದಿ ಕೇಳಿದೆ. ನಾನು ಸ್ಥಳಕ್ಕೆ ತೆರಳಿ ಸಂತ್ರಸ್ತರನ್ನು ಖುದ್ದಾಗಿ ಭೇಟಿ ಮಾಡುತ್ತೇನೆ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.








