ಬೆಂಗಳೂರು: ಬಹುಮಹಡಿ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.
ಇಲ್ಲಿಯ ಕುಂಬಾರಪೇಟೆಯಲ್ಲಿನ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಗೆ ಆರನೇ ಮಹಡಿಗೂ ಹಬ್ಬಿದೆ. ನೀರು ಖಾಲಿಯಾಗಿದ್ದರಿಂದ ಸಿಬ್ಬಂದಿ ಬೆಂಕಿ ನಂದಿಸಲು ಹರ ಸಾಹಸಪಡುತ್ತಿದ್ದಾರೆ.
ಐದು ವಾಹನಗಳಲ್ಲಿ ಬಂದ 30 ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಬೆಂಕಿ ಧಗಧಗಿಸಿದ ಪರಿಣಾಮ ಮೂರನೇ ಮಹಡಿಯಿಂದ ಆರನೇ ಮಹಡಿಗೆ ಬೆಂಕಿ ಹಬ್ಬಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.