ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ (Los Angles Wildfire)) ಕಾಡ್ಗಿಚ್ಚು ಜೋರಾಗಿ ಹಬ್ಬಿದ್ದು, ಕಂಡ ಕಂಡ ಮನೆಗಳೆಲ್ಲ ಸುಟ್ಟು ಹೋಗುತ್ತಿವೆ. ಭಾರತದ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಈ ಬೆಂಕಿಗೆ ಬೆಚ್ಚಿಬಿದ್ದಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿರುವ ಅಗ್ನಿಶಾಮಕ ದಳವು ಹೇಗೆ ಕಾರ್ಯ ನಿರ್ವಹಿಸುತ್ತಿದೆ ಎಂಬುದನ್ನು ವಿವರಿಸಿದ್ದಾರೆ.
ಪ್ರಿಯಾಂಕಾ ಕೂಡ ಲಾಸ್ ಏಂಜಲೀಸ್‌ನಲ್ಲಿ ನೆಲೆಸಿದ್ದಾರೆ. ತಮ್ಮ ನಿವಾಸದಿಂದ ಸ್ವಲ್ಪ ದೂರದಲ್ಲಿರುವ ಸ್ಥಳದಲ್ಲಿ ಈ ಅವಘಡ ನಡೆದಿದೆ. ಹೀಗಾಗಿ ಅವರು ತಮ್ಮ ಮನೆಯ ಬಾಲ್ಕನಿಯಿಂದ ಶೂಟ್ ಮಾಡಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಅನಾಹುತದಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಸಂತಾಪಗಳು. ನಾವೆಲ್ಲರೂ ಈ ರಾತ್ರಿ ಸೇಫ್ ಆಗಿರುತ್ತೇವೆಂದು ಭಾವಿಸಿದ್ದೇನೆಂದು ಬರೆದುಕೊಂಡಿದ್ದಾರೆ.
ನಟಿ ಶೇರ್ ಮಾಡಿದ ಮತ್ತೊಂದು ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ, ಲಾಸ್ ಏಂಜಲೀಸ್ ಕಾಡ್ಗಿಚ್ಚಿನ ಸಂದಿಗ್ಧ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ ನಮ್ಮ ರಕ್ಷಕರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಘಟನೆಯಲ್ಲಿ ಇಲ್ಲಿಯವರೆಗೆ ಐವರು ಸಜೀವ ದಹನವಾಗಿದ್ದಾರೆ. ಈ ಮಧ್ಯೆ 1,00,000 ಜನರ ಸ್ಥಳಾಂತರಕ್ಕೆ ಆದೇಶಿಸಲಾಗಿದೆ. ಸುಮಾರು 1,500 ಮನೆಗಳು ಸುಟ್ಟು ಭಸ್ಮವಾಗಿವೆ ಎನ್ನಲಾಗಿದೆ.