ಉತ್ತರ ಪ್ರದೇಶ : ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : ಇಬ್ಬರು ಸಜೀವ ದಹನ..!
ಉತ್ತರ ಪ್ರದೇಶ : ಆಸ್ಪತ್ರೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ಅಗ್ನಿ ಅವಘಡ ಉಂಟಾಗಿ ವೃದ್ಧೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಉಳಿದ ರೋಗಿಗಳನ್ನು ಸುರಕ್ಷಿತವಾಗಿ ಬೇರೆ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.
80 ವರ್ಷದ ವೃದ್ಧೆ ರಸೂಲನ್ ಮತ್ತು ಹಮಿರ್ಪುರ್ ರಾತ್ ಎಂಬುವವರು ಮೃತಪಟ್ಟಿದ್ದಾರೆ. ಇವರಿಬ್ಬರೂ ಐಸಿಯುನಲ್ಲಿ ದಾಖಲಾಗಿದ್ದರು. ಉತ್ತರಪ್ರದೇಶ ಸರಕಾರದ ಗಣೇಶ್ ಶಂಕರ್ ವಿದ್ಯಾರ್ಥಿ ವೈದ್ಯಕೀಯ ಕಾಲೇಜಿನ ಭಾಗವಾದ ಎಲ್ ಪಿಎಸ್ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿಯಲ್ಲಿ ಕನಿಷ್ಠ 146 ರೋಗಿಗಳು ದಾಖಲಾಗಿದ್ದರು. ಎಲ್ಲ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿ ಕಾಣಿಸಿಕೊಂಡ ತಕ್ಷಣ 146 ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎನ್ನಲಾಗಿದ್ದು, 9 ರೋಗಿಗಳು ಇನ್ನೂ ಐಸಿಯುನಲ್ಲಿದ್ದಾರೆ. ಅವರು ವೈದ್ಯಕೀಯವಾಗಿ ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಮಗಳ ಮೇಲೆ 5 ವರ್ಷಗಳ ಕಾಲ ತಂದೆಯಿಂದ ನಿರಂತರ ಅತ್ಯಾಚಾರ
ಅಲೆಮಾರಿ ಕುಟುಂಬದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಕಾಮುಕ
ಸವರ್ಣಿಯರ ಕಿರುಕುಳ ತಾಳರಾರದೇ ಲೈವ್ ನಲ್ಲಿ ವಿಷ ಸೇವಿಸಿದ ದಲಿತ ಕುಟುಂಬ..!