ಸಂಸತ್ತಿನ ಅನೆಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ
ಹೊಸದಿಲ್ಲಿ, ಅಗಸ್ಟ್ 17: ದೆಹಲಿಯ ಸಂಸತ್ತು ಅನೆಕ್ಸ್ ಕಟ್ಟಡದ 6 ನೇ ಮಹಡಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ವರದಿ ತಿಳಿಸಿದೆ.
ಬೆಂಕಿಯನ್ನು ನಂದಿಸುವ ಕಾರ್ಯಾಚರಣೆಯಲ್ಲಿ ಏಳು ಅಗ್ನಿಶಾಮಕ ವಾಹನಗಳು ಭಾಗಿಯಾಗಿದ್ದವು.

ಬೆಳಿಗ್ಗೆ 7.30 ಕ್ಕೆ ಕರೆ ಬಂದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ.








