ಮಂಡ್ಯದಲ್ಲಿ ಜವರಾಯನ ಅಟ್ಟಹಾಸ : ಕಾರಲ್ಲಿ ಬೆಂಕಿ, ಮೂವರು ಸಜೀವ ದಹನ

1 min read
car

ಮಂಡ್ಯದಲ್ಲಿ ಜವರಾಯನ ಅಟ್ಟಹಾಸ : ಕಾರಲ್ಲಿ car ಬೆಂಕಿ, ಮೂವರು ಸಜೀವ ದಹನ

ಮಂಡ್ಯ : ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದಾರೆ.

ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಬಳಿ ಶುಕ್ರವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿದ್ದು, ಕಾರಿನಲ್ಲಿದ್ದ ಐವರ ಪೈಕಿ ಮೂರು ಸಜೀವ ದಹನ ಆಗಿದ್ದಾರೆ.

car

ಹಲಗೂರಿನ ಮಹದೇಶ್ವರ ಪೆಟ್ರೋಲ್ ಬಂಕ್ ಸಮೀಪ ಹಳ್ಳಕ್ಕೆ ಕಾರು ಪಲ್ಟಿಯಾಗಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿ ಉರಿದಿದೆ.

ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸುಟ್ಟುಕರಕಲಾಗಿದ್ದು, ಇಬ್ಬರಿಗೆ ಸ್ಥಿತಿ ಗಂಭೀರ ವಾಗಿದೆ.

ಶೇಖ್ ಫೈಸಲ್(44), ಮೆಹಕ್(33) ಮತ್ತು ಶೇಖ್ ಆಯಿಲ್(11) ಮೃತ ದುರ್ದೈವಿಗಳಾಗಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲಗೂರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರದಲ್ಲಿ 10 – 12ನೇ ತರಗತಿ ಪರೀಕ್ಷೆ ರದ್ದು..!

corona cases

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd