ಕಾರ್ಮಿಕರ ಕೋಣೆಯಲ್ಲಿ ಬೆಂಕಿ ಅವಘಡ | ಸುಟ್ಟ ಗಾಯಗಳಿಂದ ನರಳುತ್ತಿರುವ 13 ಯುವಕರು Saaksha Tv
ಆಂದ್ರಪ್ರದೇಶ: ಕಾರ್ಮಿಕರ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು 13 ಯುವಕರು ಸುಟ್ಟ ಗಾಯಗಳಿಂದ ನರಳುತ್ತಿರುವ ಘಟನೆ ವಿಜಯನಗರ ಜಿಲ್ಲೆಯ ಬೊಬ್ಬಿಲಿ ನಗರದಲ್ಲಿ ನಡೆದಿದೆ.
ಬೊಬ್ಬಲಿ ನಗರದಲ್ಲಿ ಕೆಲವು ದಿನಗಳಿಂದ ಯುವಕರು ಕಾರ್ಮಿಕ ಕೆಲಸ ಮಾಡುತ್ತಿದ್ದರು. ಇವರು ಕಾರ್ಮಿಕ ಕೆಲಸ ಮುಗಿಸಿಕೊಂಡು ನಗರದ ಗ್ರೋತ್ ಸೆಂಟರ್ ಬೆರ್ರಿ ಎಂಬ ಉದ್ಯಮದ ಪಕ್ಕದಲ್ಲಿರುವ ಕಾರ್ಮಿಕರ ಕೋಣೆಯಲ್ಲಿ ವಾಸವಾಗಿದ್ದರು. ಮಧ್ಯರಾತ್ರಿ ಕಾರ್ಮಿಕರು ಕೋಣೆಯಲ್ಲಿದ್ದಾಗ ಗ್ಯಾಸ್ ಸೋರಿಕೆಯಾಗಿದೆ.
ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಲೇ ಬೆಂಕಿ ಎಲ್ಲ ಕಡೆ ಆವರಿಸಿಕೊಂಡಿದೆ. ಕೋಣೆಯಲ್ಲಿದ್ದ ಯುವಕರು ಹೊರ ಬರಲು ಸಾಧ್ಯವಾಗದ ಹಿನ್ನೆಲೆ ಅಲ್ಲೇ ಸುಟ್ಟ ಗಾಯಗಳಿಂದ ನರಳಾಡಿದ್ದಾರೆ. ಈ ಅವಘಡದಲ್ಲಿ ಸುಮಾರು 13 ಕಾರ್ಮಿಕರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸಂತ್ರಸ್ತರನ್ನು ವಿಜಯನಗರದ ತಿರುಮಲ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.