ಬಿಎಂಟಿಸಿ ಬಸ್ ನಲ್ಲಿ ಬೆಂಕಿ | 30 ಪ್ರಯಾಣಿಕರು ಅಪಾಯದಿಂದ ಪಾರು Saaksha Tv
ಬೆಂಗಳೂರು: ಬಿಎಂಟಿಸಿ ಬಸ್ ಹೋಗುವಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿರುವ ಘಟನೆ ರಾಜಧಾನಿಯ ಜಯನಗರದ ಸೌತ್ ಎಂಡ್ ಸರ್ಕಲ್ ಬಳಿ ನಡೆದಿದೆ.
ಸುಮಾರು 30 ಪ್ರಯಾಣಿಕರಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಜ್ವಾಲೆ ಹೆಚ್ಚಾಗುತ್ತಿದ್ದಂತೆ ಚಾಲಕ ಎಲ್ಲ ಪ್ರಯಾಣಿಕರನ್ನು ಇಳಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಬಸ್ ನ್ನು ಸಂಪೂರ್ಣ ಆವರಿಸಿದೆ. ಕೂಡಲೇ ಅಗ್ನಿಶಾಮಕದಳಕ್ಕೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತಾಂತ್ರಿಕ ಕಾರಣಗಳಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಬಿಎಂಟಿಸಿಯ ತಾಂತ್ರಿಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ. ಇದೇ ರೀತಿಯಾದ ಘಟನೆ ಕೆಲದಿನಗಳ ಹಿಂದೆ ಚಾಮರಾಜಪೇಟೆಯ ಮಕ್ಕಳ ಕೂಟ ಬಸ್ ನಿಲ್ದಾಣ ಬಳಿ ಬಿಎಂಟಿಸಿಸ್ ಬಸ್ನಲ್ಲಿ ಅಗ್ನಿ ಕಾಣಿಸಿಕೊಂಡಿತ್ತು.








