ಸ್ಪೈಸ್ ಜೆಟ್ ವಿಮಾನದ ಬೆಂಕಿ; ತುರ್ತು ಭೂಸ್ಪರ್ಷ – ತಪ್ಪಿದ ಅನಾಹುತ
ಭಾನುವಾರ ಪಾಟ್ನಾ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಸ್ಪೈಸ್ ಜೆಟ್ ಫ್ಲೈಟ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಪಾಟ್ನಾದಿಂದ ದೆಹಲಿಗೆ ಬೆಳಗ್ಗೆ 11.55ಕ್ಕೆ ವಿಮಾನ ಟೇಕಾಫ್ ಆಗಿದ್ದು, ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಇಂಜಿನ್‌ನಿಂದ ಹೊಗೆ ಬರಲಾರಂಭಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ವಿಮಾನದಲ್ಲಿ 185 ಪ್ರಯಾಣಿಕರಿದ್ದು, ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಸ್ಥಳದಲ್ಲಿ ಆಂಬ್ಯುಲೆನ್ಸ್ ಕೂಡ ಇದೆ. ಎಂಜಿನ್‌ಗೆ ಬೆಂಕಿ ಹೊತ್ತಿಕೊಂಡಿರುವುದು ತನಿಖೆಯ ನಂತರವಷ್ಟೇ ತಿಳಿಯಲಿದೆ.
https://twitter.com/i/status/1538421923088318464
Fire on Patna-Delhi SpiceJet flight, plane makes emergency landing








