ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ : ಹೊತ್ತಿ ಉರಿದ ಬೋಗಿ
ಉತ್ತರಾಖಂಡ : ಕನಸ್ರೋ ಸಮೀಪ ದೆಹಲಿ-ಡೆಹರಾಡೂನ್ ಪ್ರಯಾಣಿಸುತ್ತಿದ್ದ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಶಾರ್ಟ್ ಸಕ್ರ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಬೋಗಿಯಲ್ಲಿ ಬೆಂಕಿಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರನ್ನ ಅಲ್ಲಿಂದ ಸ್ಥಳಾಂತರ ಮಾಡಲಾಗಿದೆ.
ಇದರಿಂದಾಗಿ ಭಾರಿ ಅನಾಹುತ ತಪ್ಪಿದೆ.ಸದ್ಯ ಬೆಂಕಿಯನ್ನು ನಂದಿಸಲಾಗಿದ್ದು,
ಘಟನೆಯಲ್ಲಿ ಯಾವೊಬ್ಬ ಪ್ರಯಾಣಿಕರಿಗೂ ಗಾಯಗಳಾಗಿಲ್ಲ ಎಂದು ಉತ್ತರಖಾಂಡ ಡಿಜಿಪಿ ಅಶೋಕ ಕುಮಾರ್ ತಿಳಿಸಿದ್ದಾರೆ.