ಲಕ್ನೋ: ಪಟಾಕಿ ಅಂಗಡಿಗಳಿಗೆ ಬೆಂಕಿ ತಗುಲಿದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿಕೆ ಕಂಡಿದೆ.
ಮಥುರಾದಲ್ಲಿ (Mathura) ದೀಪಾವಳಿ ಹಬ್ಬಕ್ಕಾಗಿ ನಿರ್ಮಿಸಿದ್ದ ಪಟಾಕಿ ಅಂಗಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಿಟಾ ನಾಗ್ಲಾ ಗ್ರಾಮದ ದೀಪಚಂದ್ (28) ಹಾಗೂ ನೌಜಿಲ್ ನಿವಾಸಿ ರಿಂಕು (17) ಚಿಕಿತ್ಸೆ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ. ಸುಟ್ಟ ಗಾಯಗಳಿಂದ ಬಳಲುತ್ತಿದ್ದ 10 ಜನ ಚಿಕಿತ್ಸೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದರು. ಮತ್ತಿಬ್ಬರು ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿಯೂ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನ.12 ರಂದು ಮಥುರಾದ ರಾಯಾ ಪ್ರದೇಶದ ಗೋಪಾಲ್‍ಬಾಗ್‍ನಲ್ಲಿ ಈ ಅವಘಡ ಸಂಭವಿಸಿತ್ತು. ಘಟನೆಯಲ್ಲಿ 23 ಅಂಗಡಿಗಳ ಪೈಕಿ ಏಳು ಅಂಗಡಿಗಳು ಸುಟ್ಟು ಭಸ್ಮವಾಗಿದ್ದವು. 10 ಬೈಕ್‍ಗಳು ಬೆಂಕಿಗೆ ಆಹುತಿಯಾಗಿದ್ದವು. ಅವಘಡದಲ್ಲಿ 14 ಜನರಿಗೆ ಸುಟ್ಟ ಗಾಯಗಳಾಗಿದ್ದವು, ಈಗ 12 ಜನ ಸಾವನ್ನಪ್ಪಿದ್ದಾರೆ.