ಉಪ್ಪಿನಂಗಡಿ : ಇಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಹಣತೆ, ಮೇಣದ ಬತ್ತಿ ಹೊತ್ತಿಸುವ, ಮೊಬೈಲ್ ಟಾರ್ಚ್ ಆನ್ ಮಾಡುವ ಮೂಲಕ ಏಕತೆಯ ಸಂದೇಶ ಸಾರೋಣ ಎಂದು ಪ್ರಧಾನಿ ಮೋದಿ ಕರೆ ಕೊಟ್ಟಿದ್ದರು. ಇದಕ್ಕೆ ದೇಶದಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದ್ರೆ ಉಪ್ಪಿನಂಗಡಿಯಲ್ಲಿ ಕಿಡಿಗೇಡಿಗಳು ಗುಡ್ಡಕ್ಕೆ ಬೆಂಕಿ ಹಚ್ಚಿ ಪರಾರಿ ಆಗಿದ್ದಾರೆ.

ಉಪ್ಪಿನಂಗಡಿ ಸಮೀಪ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಜೋಗಿಬೆಟ್ಟು ಎಂಬಲ್ಲಿ ಈ ಘಟನೆ ನಡೆದಿದೆ. ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರ್ಯೋನ್ಮುಖರಾದ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.








