ಮೈಸೂರು: ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಸೌಥ್ ಇಂಡಿಯನ್ (SIPM) ಪೇಪರ್ ಮಿಲ್ಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಪೇಪರ್ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಬೆಳಗಿನ ಸಮಯದಲ್ಲಿ ಪೇಪರ್ ಮಿಲ್ನ ಗೋಡಾನ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂ. ಮೌಲ್ಯದ ಪೇಪರ್ ಸುಟ್ಟು ಭಸ್ಮವಾಗಿದೆ. ಕೂಡಲೇ ಸ್ಥಳಕ್ಕೆ 6ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ನಂಜನಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.