ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಅಕ್ರಮ ಪಟಾಕಿ ಗೋದಾಮಿನಲ್ಲಿ ದೊಡ್ಡ ಮಟ್ಟದಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಗುನ್ನೌರ್ ಟೌನ್‌ಶಿಪ್‌ನಲ್ಲಿ ನಡೆದಿದೆ ಎಂದು ಪೊಲೀಸರಿಂದ ತಿಳಿದು ಬಂದಿದೆ. ಗುಡ್ಡೋ (40), ಅನಮ್ (25), ಸುಮಯ್ಯ (12) ಮತ್ತು ಅಪರಿಚಿತ ಅಪ್ರಾಪ್ತ ಬಾಲಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಸಬೀರ್ ಅಲಿ ಎಂಬುವವರಿಗೆ ಸೇರಿದ್ದ ಪಟಾಕಿ ಗೋದಾಮಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿತ್ತು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ಬನ್ಸಾಲ್ ಪಿಟಿಐಗೆ ತಿಳಿಸಿದ್ದಾರೆ.
ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಓರ್ವ ಬಾಲಕನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಗಾಯಗೊಂಡಿರುವ ಇನ್ನಿತರ 7 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.








