ದೀಪಾವಳಿ ಸಂದರ್ಭದಲ್ಲಿ ಪಟಾಕಿ ಬ್ಯಾನ್ ಸರಿಯಲ್ಲ : ಮುತಾಲಿಕ್
ಬೆಳಗಾವಿ : ಕೊರೊನಾ ಹಿನ್ನೆಲೆ ರಾಜ್ಯ ಸರ್ಕಾರ ಪಟಾಕಿ ಬ್ಯಾನ್ ಮಾಡಲು ಮುಂದಾಗಿದ್ದು, ಈ ಬಗ್ಗೆ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿ ಪಟಾಕಿ ಬ್ಯಾನ್ ಸರಿಯಲ್ಲ ಎಂದಿದ್ದಾರೆ.
ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಧಾರ್ಮಿಕ ವಿಧಿ ವಿಧಾನದಿಂದ ಆಚರಣೆಗಳು ನಡೆಯುವ ಕಾರಣ ಪಟಾಕಿಯನ್ನು ಬ್ಯಾನ್ ಮಾಡಬಾರದು.
ಪಟಾಕಿಯಿಂದ ಮಾತ್ರ ಭಾರೀ ದೊಡ್ಡ ಪ್ರಮಾಣದಲ್ಲಿ ಪರಿಸರ ಮಾಲಿನ್ಯ ಆಗುತ್ತಿದೆ ಎಂಬುದು ಸುಳ್ಳು ಎಂದು ಅಭಿಪ್ರಾಯಪಟ್ಟರು.
ಇನ್ನು ವಾಹನಗಳಿಂದ ಎಷ್ಟು ಪರಿಸರ ಮಾಲಿನ್ಯ ಆಗುತ್ತಿದೆ ಅದನ್ನು ಯಾರು ತಡೆಯುವ ಪ್ರಯತ್ನ ಮಾಡುತ್ತಿಲ್ಲ. ಈಗ ಕಾನೂನು ಜಾರಿಗೆ ಮಾಡಲು ಮುಂದಾಗಿರುವವರು ಒಮ್ಮೆ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿದರೆ ಉತ್ತಮ.
ರಾಜ್ಯದಲ್ಲಿ ದೀಪಾವಳಿಗೆ ಪಟಾಕಿ ನಿಷೇಧ : ಸಿಎಂ ಬಿಎಸ್ ವೈ
ಏಕೆಂದರೆ ಅಭಿವೃದ್ಧಿಯ ಹೆಸರಿನಲ್ಲಿ ನೀವು ಎಷ್ಟು ಪರಿಸರವನ್ನು ನಾಶ ಮಾಡುತ್ತಿದ್ದೀರಿ ಎಂಬುವುದು ಅರಿವಾಗುತ್ತದೆ. ಆದರೆ ವರ್ಷಕ್ಕೊಮ್ಮೆ ನಡೆಯುವ ಗಣೇಶ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡುವುದು ಎಷ್ಟು ಸರಿ ಎಂದು ಪ್ರಮೋದ್ ಮುತಾಲಿಕ್ ಪ್ರಶ್ನೆ ಮಾಡಿದರು.
ಪಟಾಕಿ ಬ್ಯಾನ್ ಮಾಡುವ ಬಗ್ಗೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಈ ಬಾರಿಯ ದೀಪಾವಳಿಕೆ ಯಾವುದೇ ರೀತಿಯ ಪಟಾಕಿಗೆ ಅವಕಾಶ ಇರುವುದಿಲ್ಲ.
ಕೊರೊನಾ ಸೋಂಕು ಹಿನ್ನೆಲೆ ಸರ್ಕಾರದಿಂದ ಪಟಾಕಿ ನಿಷೇಧ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ ಪಟಾಕಿ ನಿಷೇಧಿಸಿ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವುದಾಗಿ ಬಿಎಸ್ ವೈ ತಿಳಿಸಿದರು.
ಶಾಲೆಗಳ ಪುನಾರಂಭ ಬಗ್ಗೆ ಸರ್ಕಾರದ ಪತ್ರಕ್ಕೆ ಸಿದ್ದು ಕೊಟ್ಟ ಉತ್ತರದಲ್ಲೇನಿದೆ ಗೊತ್ತಾ..?
ಶಾಲೆಗಳ ಪುನಾರಂಭ ಬಗ್ಗೆ ಸರ್ಕಾರದ ಪತ್ರಕ್ಕೆ ಸಿದ್ದು ಕೊಟ್ಟ ಉತ್ತರದಲ್ಲೇನಿದೆ ಗೊತ್ತಾ..?
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










