Fireworks mishap-ಬೆಂಗಳೂರು: ನಾಡಿನಾದ್ಯಂತ ಎಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದೆ ಈ ನಡುವೆ ಪಟಾಕಿ ದುರಂತಗಳು ಹೆಚ್ಚಾಗುತ್ತಿವೆ.
ಹಬ್ಬದ ಪ್ರಥಮ ದಿನದಂದೆ ಪಟಾಕಿ ಅವಘಡಕ್ಕೆ ಒಳಗಾದ 7 ಜನರು ರಾಜಾಜಿನಗರದ ನಾರಾಯಣ ನೇತ್ರಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ .
ಏಳುಜನರಲ್ಲಿ ಮೂವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ, ಇಬ್ಬರಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ , ಒಬ್ಬನಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ಮುಂದುವರಿದಿದೆ ಎಂದು ನಾರಾಯಣ ನೇತ್ರಾಲಯ ಆಸ್ಪತ್ರೆಯ ಡಾ.ಭುಜಂಗಶೆಟ್ಟಿ ತಿಳಿಸಿದ್ದಾರೆ.
ಇತ್ತ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ನಾಲ್ಕು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಮೂವರಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ, 15 ವರ್ಷದ ಬಾಲಕನ ಮುಖ ಸುಟ್ಟು ಹೋಗಿದೆ, ಈ ಯುವಕನನ್ನು ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಹಾಗೂ ಥಣಿಸಂದ್ರದ 7 ವರ್ಷದ ಬಾಲಕನ ಎಡಗಣ್ಣಿಗೆ ಹಾಗೂ ಫ್ರೇಜರ್ಟೌನ್ನ 7 ವರ್ಷದ ಬಾಲಕನ ಬಲಗಣ್ಣಿಗೆ ಹಾನಿಯಾಗಿದೆ ಆದರೆ ಕಣ್ಣೆಗೆ ಕಣ್ಣಿಗೆ ಯಾವುದೇ ತೊಂದರೆ ಇಲ್ಲ ಎಂದು ಡಾ.ವಿದ್ಯಾ ತಿಳಿಸಿದ್ದಾರೆ.








