ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ | ಮೂವರು ಯೋಧರಿಗೆ ಗಾಯ
ಜಮ್ಮು ಕಾಶ್ಮೀರ : ಕೇಂದ್ರಾಡಳಿತ ಪ್ರದೇಶ ಜಮ್ಮು&ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತು ಯೋಧರ ನಡುವೆ ಕುಂಡಿನ ಚಕಮಕಿ ನಡೆದಿದ್ದು, ಮೂವರು ಯೋಧರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಮಾಲ್ವಾದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು ಸೈನಿಕರು ಮತ್ತು ಒಬ್ಬ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಸಣ್ಣ ಪ್ರಮಾಣದಲ್ಲಿ ಗಾಯವಾಗಿದೆ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇನ್ನೂ ಭಯೋತ್ಪದಕರ ವಿರುದ್ಧ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ವಿಜಯ್ಕುಮಾರ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಭಯೋತ್ಪಾದಕರ ವಿರುದ್ಧ ಬದ್ಗಾಂ ಪೊಲೀಸರು ಮತ್ತು ಸೇನೆಯು ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ ಎಂದು ತಿಳಿದುಬಂದಿದೆ.