ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಎರಡು ದಿನಗಳ ಹಿಂದಷ್ಟೇ ನಡೆದಿದ್ದ ಜೋಡಿ ಕೊಲೆ ಆರೋಪಿ ಮೇಲೆ ಪೊಲೀಸರು ಬೆಳ್ಳಂಬೆಳಿಗ್ಗೆ ಫೈರಿಂಗ್ ಮಾಡಿ ಸೆರೆ ಹಿಡಿದಿದ್ದಾರೆ.
ಕೊಲೆ ಆರೋಪಿಯನ್ನು ಬಂಧಿಸಲು ಹಾಸನ ಎಸ್ಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ತೆರಳಿದ್ದರು. ಆರೋಪಿ ಪ್ರಸಾದ್ ಕೋಳಿ ಫಾರಂನಲ್ಲಿ ಅಡಗಿ ಕುಳಿತಿದ್ದ. ಈ ವೇಳೆ ಇನ್ನ್‍ಪೆಕ್ಟರ್ ವಿನಯ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ. ಹೀಗಾಗಿ ಮತ್ತೊಬ್ಬ ಇನ್ಸ್‍ಪೆಕ್ಟರ್ ಸಿದ್ದರಾಮೇಶ್ವರ್ ಆರೋಪಿ ಪ್ರಸಾದ್‍ನ ಕಾಲಿಗೆ ಗುಂಡು ಹೊಡೆದು ಸೆರೆ ಹಿಡಿದಿದ್ದಾರೆ.
ಕಳೆದ ಭಾನುವಾರ ಚನ್ನರಾಯಪಟ್ಟಣದಲ್ಲಿ ವೃದ್ಧ ದಂಪತಿ ಮರಳೀಧರ್(71), ಉಮಾದೇವಿ(67)ಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಈ ಜೋಡಿ ಕೊಲೆ ಹಾಸನ ಜಿಲ್ಲೆಯ ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಹಣಕ್ಕಾಗಿ ವೃದ್ಧ ದಂಪತಿ ಕೊಲೆ
ಚನ್ನರಾಯಪಟ್ಟಣ ತಾಲೂಕಿನ ಆಲಗೊಂಡನಹಳ್ಳಿ ಗ್ರಾಮದ ವೃದ್ಧ ದಂಪತಿ ಮರಳೀಧರ್, ಉಮಾದೇವಿಗೆ ಮಕ್ಕಳು ಇರಲಿಲ್ಲ. ಮುರಳೀಧರ್ ತಂದೆ ಕೃಷ್ಣಮೂರ್ತಿ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಹೀಗಾಗಿ ಸರ್ಕಾರ ಅವರಿಗೆ 80 ಎಕರೆ ಜಮೀನು ನೀಡಿತ್ತು.
ಮುರಳೀಧರ್ ಬಿಎಸ್ಸಿ ಅಗ್ರಿಕಲ್ಚರ್ ಪದವೀಧರರಾಗಿದ್ದು, ಕೃಷಿಯತ್ತ ಆಸಕ್ತಿ ಹೊಂದಿದ್ದರು. ತಂದೆಯಿಂದ ಬಂದ 80 ಎಕರೆ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿದ್ದರು.
ಆದರೆ, ಇತ್ತೀಚೆಗೆ ಮುರಳೀಧರ್ ಜಮೀನು ಮಾರಿದ್ದರು ಎಂಬ ಸುದ್ದಿ ಗ್ರಾಮದಲ್ಲಿ ಹರಿದಾಡಿದೆ. ಜಮೀನು ಮಾರಿ ಬಂದ ದುಡ್ಡನ್ನು ಮನೆಯಲ್ಲೇ ಇಟ್ಟುಕೊಂಡಿದ್ದಾರೆಂದು ಯಾರೋ ಹೇಳಿದ್ದನ್ನು ತಿಳಿದ ಪ್ರಸಾದ್ ಆಂಡ್ ಟೀಂ, ಮನೆಗೆ ನುಗ್ಗಿದ್ದಾರೆ. ಹಣ ನೀಡುವಂತೆ ದಂಪತಿಗೆ ಬೆದರಿಕೆ ಹಾಕಿದ್ದಾರೆ. ಹಣ ಕೊಡದೇ ಇದ್ದಾಗ ದಂಪತಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದರು. ಕೊಲೆ ನಡೆದ ಎರಡೇ ದಿನಗಳಲ್ಲಿ ಪ್ರಮುಖ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿ ಹೆಡೆಮುರಿ ಕಟ್ಟಿದ್ದಾರೆ.
*****
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.