ನಟ ಸಲ್ಮಾನ್ ಖಾನ್ ಮನೆ ಎದುರು ಗುಂಡು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6ನೇ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನ ಹರ್ಪಾಲ್ ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಪೊಲೀಸರು ಮೊಹಮ್ಮದ್ ರಫೀಕ್ ಚೌಧರಿ (Mohammed Rafique Chaudhary) ಹೆಸರಿನ 5ನೇ ಆರೋಪಿಯನ್ನು ರಾಜಸ್ಥಾನದ ನಾಗೌರ್ ನಲ್ಲಿ ಬಂಧಿಸಿದ್ದರು.
ಈ ಇಬ್ಬರೂ ಕೂಡ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ತಂಡದ ಸದಸ್ಯನೆಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ನಾಲ್ಕು ಜನರನ್ನು ಪೊಲೀಸರು ಬಂಧಿಸಿ, ತನಿಖೆಗೆ ಒಳಪಡಿಸಿದ್ದಾರೆ. ಈ ನಾಲ್ವರಲ್ಲಿ ಒಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.