ಗೋಹತ್ಯೆ ನಿಷೇಧ ಕಾಯ್ದೆ ಬಳಿಕ ರಾಜ್ಯದಲ್ಲಿ ಮೊದಲ ಕೇಸ್ ದಾಖಲು
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಮೊದಲ ಪ್ರಕರಣ ದಾಖಲಾಗಿದೆ. ಹೌದು ವಿಜಯಪುರ ಜಿಲ್ಲೆಯ ಕೂಡಗಿಯಲ್ಲಿ ಮೊಟ್ಟ ಮೊದಲ ಪ್ರಕರಣ ದಾಖಲಾಗಿರೋದಾಗಿ ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರು ತಿಳಿಸಿದ್ದಾರೆ. ಗೋ ಹತ್ಯೆ, ಮಾಂಸ ಮಾರಾಟ ಮಾಡ್ತಿದ್ದ ಹಿನ್ನೆಲೆ ಆತನನ್ನ ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಕರ್ತವ್ಯನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ : ‘ಕೈ’ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಎಫ್ ಐ ಆರ್..!
ಕೂಡಗಿ ಗ್ರಾಮದ ಬಳಿಯ ರೈಲ್ವೆ ಹಳಿ ಹತ್ತಿರದ ಖಾಸಗಿ ಶೆಡ್ ವೊಂದರಲ್ಲಿ ವ್ಯಕ್ತಿಯೊಬ್ಬ ಎತ್ತೊಂದನ್ನು ಕತ್ತರಿಸಿ ಮಾಂಸ ಮಾರಾಟದಲ್ಲಿ ತೊಡಗಿದ್ದ ವೇಳೆ ಕೂಡಗಿ ಪಿಎಸ್ಐ ರೇಣುಕಾ ಜಕನೂರು ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ ಎಂದು ಸಚಿವರು ತಿಳಿಸಿದ್ದಾರೆ. ಸಿಖಂದರ್ ಸಾಬ್ ರಾಜಾಸಾಬ್ ಬೇಪಾರಿ ಬಂಧಿತ ಆರೋಪಿ. ಒಂದು ಎತ್ತನ್ನು ಕತ್ತರಿಸಿ ಮಾಂಸ ಮಾರಾಟ ಮಾಡುತ್ತಿದ್ದ ಸರ್ವಜನಿಕರ ಮಾಹಿತಿ ಮೆರೆಗೆ ಕೂಡಗಿ ಪೊಲೀಸರು ಪರಿಶೀಲನೆ ನಡೆಸಿ ಇನ್ನೊಂದು ಎತ್ತನ್ನು ರಕ್ಷಿಸಿ ಯಲಗೂರು ಗೋಶಾಲೆಗೆ ಸಾಗಿಸಿದ್ದಾರೆ. ಕೂಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel