ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಮೊದಲ ಬಲಿ ಪಡೆದಿದೆ ಎನ್ನಲಾಗಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಶಂಕಿತ 76 ವರ್ಷದ ವೃದ್ಧರೊಬ್ಬರು ಕಲಬುರ್ಗಿಯಲ್ಲಿ ಮೃತಪಟ್ಟಿದ್ದಾರೆ. ಮಹ್ಮದ್ ಸಿದ್ದಿಕಿ ಮೃತ ವ್ಯಕ್ತಿಯಾಗಿದ್ದು, ಜ್ವರದಿಂದ ಬಳಲುತ್ತಿದ್ದ ಸಿದ್ದಿಕಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇನ್ನು ಹೆಚ್ಚಿನ ಪರೀಕ್ಷೆಗಾಗಿ ವೈದ್ಯರು ವೃದ್ಧನ ರಕ್ತದ ಮಾದರಿಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಪರೀಕ್ಷಾ ವರದಿ ಇಂದು ಸಂಜೆ ಬರಬೇಕಾಗಿತ್ತು. ಆದರೆ ನಿನ್ನೆ ರಾತ್ರಿಯೇ ವೃದ್ಧ ಮೃತಪಟ್ಟಿದ್ದಾರೆ.
ಕೊರೋನಾ ವೈರಸ್ ನಿಂದಲೇ ವೃದ್ಧ ಸಾವನ್ನಪ್ಪಿರುವುದಾಗಿ ಇನ್ನು ಖಚಿತವಾಗಿಲ್ಲ. ಪರೀಕ್ಷಾ ವರದಿಗಾಗಿ ಕಲಬುರಗಿ ಜಿಲ್ಲಾ ಆರೋಗ್ಯ ಇಲಾಖೆ ಕಾಯುತ್ತಿದೆ.









