ಮೊದಲ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಗೆ ಭಾಜನರಾದ ಮೋದಿ – ನಾಳೆ ಮುಂಬೈನಲ್ಲಿ ಪ್ರಧಾನ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಮುಂಬೈನಲ್ಲಿ ಸಂಜೆ 5 ಗಂಟೆಗೆ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮೋದಿ ಅವರಿಗೆ ಮೊದಲ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಈ ವರ್ಷದ ಫೆಬ್ರವರಿಯಲ್ಲಿ ನಿಧನರಾದ ಭಾರತ ರತ್ನ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ರಾಷ್ಟ್ರಕ್ಕೆ ಅದ್ಭುತ ಮತ್ತು ಅನುಕರಣೀಯ ಕೊಡುಗೆ ನೀಡಿದ ವ್ಯಕ್ತಿಗೆ ವಾರ್ಷಿಕವಾಗಿ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಪ್ರಶಸ್ತಿಯನ್ನು ಪ್ರಕಟಿಸಿದ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನ, ಮೋದಿ ಅವರು ಭಾರತವನ್ನು ಜಾಗತಿಕ ನಾಯಕತ್ವದ ಹಾದಿಯಲ್ಲಿ ಇರಿಸಿರುವ ಅಂತರರಾಷ್ಟ್ರೀಯ ರಾಜಕಾರಣಿ ಎಂದು ಹೇಳಿದರು. ಮೋದಿ ಅವರನ್ನು ಸ್ಫೂರ್ತಿ ಎಂದು ಕರೆದ ಸಂಸ್ಥೆ, ಭಾರತವು ತನ್ನ ಭವ್ಯ ಇತಿಹಾಸದಲ್ಲಿ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ಹೇಳಿದೆ.