ನವದೆಹಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ಮಾಡಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯಲ್ಲದೆ, ಹಲವಾರು ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಸಂತರು ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಗವಹಿಸಲಿದ್ದಾರೆ.
ಆಹ್ವಾನ ಪತ್ರಿಕೆ ರೆಡಿ..!
ಶಿಲಾನ್ಯಾಸ ಕಾರ್ಯಕ್ರಮಕ್ಕೆ ಹಳದಿ ಹಿನ್ನೆಲೆ ಬಣ್ಣವನ್ನು ಹೊಂದಿರುವ ಆಮಂತ್ರಣ ಪತ್ರವನ್ನು ಟ್ರಸ್ಟ್ ಸಿದ್ಧಪಡಿಸಿದೆ. ಸುಮಾರು 200 ಮಂದಿಗೆ ಆಮಂತ್ರಣ ಪತ್ರವನ್ನು ಕಳುಹಿಸಲಾಗುತ್ತಿದೆ. ರಾಮ ಮಂದಿರವು 161 ಅಡಿ ಎತ್ತರ ಇರಲಿದ್ದು,
ಇದರ ನಿರ್ಮಾಣ ಸುಮಾರು 3 ರಿಂದ 3.5 ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಇನ್ನು ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ಇಂದಿನಿಂದ ಅಯೋಧ್ಯೆಯಲ್ಲಿ ಪೂಜಾ ಕಾರ್ಯಕ್ರಮಗಳು ಆರಂಭವಾಗಿದ್ದು, ಅಯೋಧ್ಯೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.