ನವದೆಹಲಿ: ಮಿಜೋರಾಂ ಹಾಗೂ ಛತ್ತೀಸ್ಗಢದಲ್ಲಿ ಇಂದು ಮೊದಲ ಹಂತದ ಮತದಾನ ಆರಂಭವಾಗಿದೆ.
ಛತ್ತೀಸ್ಗಢದ 90 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತವಾಗಿ 20 ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯಲಿದೆ. ಇನ್ನುಳಿದ ಕ್ಷೇತ್ರಗಳಿಗೆ ನ. 17ರಂದು ಮತದಾನ ನಡೆಯಲಿದೆ.
ಮಿಜೋರಾಂನಲ್ಲಿ 40 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಹೀಗಾಗಿ ರಾಜ್ಯದ ತುಂಬೆಲ್ಲ ಕಟ್ಟೆಚ್ಚರ ವಹಿಸಲಾಗಿದೆ.
ರಾಜ್ಯದಾದ್ಯಂತ ಮತ್ತು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ನ ಅಂತರರಾಷ್ಟ್ರೀಯ ಗಡಿಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.