ಬೆಂಗಳೂರು: ಪ್ರಥಮ ಪಿಯುಸಿ ವಾರ್ಷಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದ್ದು, ಫೆ.13ರಿಂದ 28ರ ವರೆಗೆ ಪರೀಕ್ಷೆಗಳು ನಡೆಯಲಿವೆ.
ಫೆ.13- ಕನ್ನಡ, ಅರೇಬಿಕ್, ಫೆ.14- ಹಿಂದಿ, ಫೆ.15- ರಾಜ್ಯಶಾಸ, ಸಂಖ್ಯಾಶಾಸ, ಫೆ.16- ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆೃಂಡ್ ವೆಲ್‌ವೆಸ್, ಫೆ.17- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ, ಗೃಹ ವಿಜ್ಞಾನ, ಫೆ.19- ಇತಿಹಾಸ, ಭೌತಶಾಸ, ಫೆ.20- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫೆ.21- ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ, ಫೆ.22- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಫೆ 23- ಗಣಿತ, ಶಿಕ್ಷಣ ಶಾಸ್ತ್ರ, ಫೆ.24- ಅರ್ಥಶಾಸ್ತ್ರ, ಫೆ.26- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಫೆ.27- ಇಂಗ್ಲಿಷ್, ಫೆ.28- ಭೂಗೋಳಶಾಸ್ತ್ರ ಹಾಗೂ ಜೀವಶಾಸ್ತ್ರ ಹಾಗೂ ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆಗಳೆಲ್ಲ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ. 80 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಇರಲಿದೆ ಎಂದು ಮಂಡಳಿ ತಿಳಿಸಿದೆ.