ನಿರ್ಮಾಪಕಿ ಹಾಗೂ ಪತ್ನಿ ಗೀತಾ (Geetha) ಅವರು ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಮೊದಲ ಬಾರಿಗೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಗೀತಾ ಕಾಂಗ್ರೆಸ್ ಪಕ್ಷ ಸೇರಿ, ನಾಳೆಯಿಂದ ಸೊರಬದಲ್ಲಿ ಪ್ರಚಾರ ನಡೆಸುತ್ತಾರೆ. ನಾನೂ ತೆರಳುತಿದ್ದೇನೆ. ಸೊರಬದಲ್ಲಿ ಮಧು ಹಾಗೂ ಅವರ ಮಾವ ಭೀಮ ನಾಯಕ್ ಸಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ’ ಎಂದು ಹೇಳಿದ್ದಾರೆ.
‘ಬಂಗಾರಪ್ಪ ಅವರ ಮಕ್ಕಳಾದ ಮಧು ಹಾಗೂ ಗೀತಾರಿಗೆ ರಾಜಕೀಯ ಹೊಸದೇನು ಅಲ್ಲ. ನನ್ನ ತಾಯಿ ಸತ್ತ ನಂತರ ಶಕ್ತಿಧಾಮದ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಮಕ್ಕಳಿಗೆ ಸ್ಕಿಲ್ ಡೆವಲಪ್ಮೆಂಟ್ ಮಾಡುತಿದ್ದಾರೆ. ಸುತ್ತಮುತ್ತ ಫ್ರೀ ಬೇಕಿಂಗ್ ಕ್ಯಾಂಪ್ ಮಾಡಿ ಅವೇರ್ ನೆಸ್ ಕೂಡ ಮಾಡಿದ್ದಾರೆ. ಸಮಾಜಮುಖಿ ಕೆಲಸಗಳ ಬಗ್ಗೆ ಅವರಿಗೆ ಆಸಕ್ತಿ ಇದೆ ಎಂದು ಹೇಳಿದ್ದಾರೆ.
ಗೀತಾ ಶಿವರಾಜ್ ಕುಮಾರ್ ರ ಕಿರಿಯ ಸಹೋದರ ಮಧು ಬಂಗಾರಪ್ಪ (Madhu Bangarappa) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ಅವರ ವಿರುದ್ಧ ಸೊರಬ (Soraba) ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.








