ಸ್ವಾತಂತ್ರ್ಯದ “ಅಮೃತ ಮಹೋತ್ಸವ” ಪ್ರಯುಕ್ತ “ಫಿಟ್ ಇಂಡಿಯಾ ಫ್ರೀಡಂ ರನ್ 2.0” ಅಭಿಯಾನಕ್ಕೆ ಚಾಲನೆ
ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರವ್ಯಾಪಿ ಫಿಟ್ ಇಂಡಿಯಾ ಫ್ರೀಡಮ್ ರನ್ 2.0 ಅಭಿಯಾನಕ್ಕೆ ಶುಕ್ರವಾರ (ಆಗಸ್ಟ್ 13) ಅಧಿಕೃತವಾಗಿ ಚಾಲನೆ ನೀಡಿದರು. ಸ್ವಾತಂತ್ರ್ಯದ “ಅಮೃತ ಮಹೋತ್ಸವ” ( ಆಜಾದಿ ಕಾ ಅಮೃತ ಮಹೋತ್ಸವ ) 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸರ್ಕಾರವು ಫಿಟ್ ಇಂಡಿಯಾ ಫ್ರೀಡಂ ರನ್ 2.0 ಅಭಿಯಾನಕ್ಕೆ ಚಾಲನೆ ನೀಡಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಭಾಗವಾಗಿ ದೇಶಾದ್ಯಂತ ಇಂದು ಆಯೋಜಿಸಿರುವ ಫಿಟ್ ಇಂಡಿಯಾ ಸ್ವಾತಂತ್ರ್ಯದ ಓಟ ೨.೦ಗೆ ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ದೆಹಲಿಯ ಮೇಜರ್ ಧ್ಯಾನ್‌ಚಂದ್ ಕ್ರೀಡಾಂಗಣದಲ್ಲಿ ಚಾಲನೆ ನೀಡಿ ಬಳಿಕ ಓಟದಲ್ಲಿ ಭಾಗವಹಿಸಿದರು.
ಕ್ರೀಡಾ ಸಚಿವರು ಫಿಟ್ ಇಂಡಿಯಾ ಫ್ರೀಡಂ ರನ್ 2.0ದ ಪ್ರತಿಜ್ಞಾ ವಿಧಿಯನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಬೋಧಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಫಿಟ್ ಇಂಡಿಯಾ ಫ್ರೀಡಂ ರನ್ 2.0 ದೇಶಾದ್ಯಂತ ಪ್ರಾರಂಭಿಸಿದೆ. ದೇಶದ 75 ಪ್ರಮುಖ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭವಾಗಿದೆ. ಗಾಂಧಿ ಜಯಂತಿ ಅಕ್ಟೋಬರ್ 2ರವರೆಗೆ ಅದು ಮುಂದುವರಿಯಲಿದೆ. ಪ್ರತಿ ಜಿಲ್ಲೆಯ 75 ಗ್ರಾಮಗಳು ಇದರಲ್ಲಿ ಭಾಗಿಯಾಗಲಿವೆ ಎಂದು ಮಾಹಿತಿ ನೀಡಿದರು. ನಾವು ನಮ್ಮ ಸ್ವಾತಂತ್ರ್ಯದ 75ನೇ ವರ್ಷಾಚರಣೆಯಿಂದ 100 ನೇ ವರ್ಷಕ್ಕೆ ಹೋಗುವಾಗ ಮುಂದಿನ 25 ವರ್ಷಗಳಲ್ಲಿ ನಾವು ದೇಶವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಳ್ಳಲು ಬಯಸುತ್ತೇವೆ ಎಂಬುದನ್ನು ನೋಡುವುದು ನಮ್ಮೆಲ್ಲರ ಮೇಲೆ ಅವಲಂಬಿತವಾಗಿರುತ್ತದೆ. ನಾವು ಫಿಟ್ ಆಗಿ ಇದ್ದರೆ ಮಾತ್ರ ಅದು ಸಾಧ್ಯ ಎಂದು ಹೇಳಿದರು.
ಈ ಅಭಿಯಾನದಡಿ ಸರ್ಕಾರವು ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈ ವರ್ಷದ ಕೊನೆಯಲ್ಲಿ ಅಕ್ಟೋಬರ್ 2 ರ ವೇಳೆಗ ಕಾರ್ಯಕ್ರಮಗಳು ಮುಕ್ತಾಯಗೊಳ್ಳಲಿದೆ. ಸರ್ಕಾರವು 75 ಭೌತಿಕ ಕಾರ್ಯಕ್ರಮಗಳನ್ನು ವಿವಿಧ ಐತಿಹಾಸಿಕ ಸ್ಥಳಗಳಲ್ಲಿ ಆಯೋಜಿಸಿದೆ ಎಂದು ಕ್ರೀಡಾ ಸಚಿವಾಲಯದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 744 ಜಿಲ್ಲೆಗಳಲ್ಲಿ 75 ಹಳ್ಳಿಗಳು ಮತ್ತು ದೇಶಾದ್ಯಂತ 30,000 ಶಿಕ್ಷಣ ಸಂಸ್ಥೆಗಳಲ್ಲಿ ಈ ಅಭಿಯಾನದಡಿ ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗುವುದು. ಈ ಉಪಕ್ರಮದ ಮೂಲಕ, 7.50 ಕೋಟಿಗೂ ಹೆಚ್ಚು ಯುವಕರು ಮತ್ತು ನಾಗರಿಕರು ಓಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಠಾಕೂರ್ ಭರವಸೆ ವ್ಯಕ್ತಪಡಿಸಿದ್ದರು.
ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಫಿಟ್ ಇಂಡಿಯಾ ಫ್ರೀಡಂ ರನ್ 2.0 ಅಭಿಯಾನದಲ್ಲಿ ಭಾಗಿಯಾದ ಬಿಎಸ್ ಎಫ್ ಯೋಧರು ನಂತರ ಓಟದಲ್ಲಿ ಭಾಗಿಯಾದರು. ಮುಂಬೈಯ ಗೇಟ್ ವೇ ಆಫ್ ಇಂಡಿಯಾದಲ್ಲಿ ಆರಂಭಗೊಂಡ ಫಿಟ್ ಇಂಡಿಯಾ ಅಭಿಯಾನದಲ್ಲಿ 40 ರಾಷ್ಟ್ರೀಯ ಭದ್ರತಾ ಪಡೆಯ ಕಮಾಂಡೊಗಳು ಭಾಗಿಯಾಗಿದ್ದರು. ಪ್ರತಿಯೊಬ್ಬರೂ ಭಾಗವಹಿಸಿ ಅದನ್ನು “ಜನರ ಚಳುವಳಿ” ಯನ್ನಾಗಿ ಮಾಡಬೇಕೆಂದು ಠಾಕೂರ್ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ. ನಾವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವಾಗ, ನಾವು ಫಿಟ್ ಮತ್ತು ಆರೋಗ್ಯಕರ ಭಾರತಕ್ಕಾಗಿ ಸಂಕಲ್ಪ ಮಾಡಬೇಕು ಏಕೆಂದರೆ ಫಿಟ್ ಮತ್ತು ಆರೋಗ್ಯಕರ ಭಾರತ ಮಾತ್ರ ಬಲಿಷ್ಠ ಭಾರತವಾಗಬಹುದು” ಎಂದು ಠಾಕೂರ್ ಹೇಳಿದರು. ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಕೇಂದ್ರ ಮಂತ್ರಿ ನಿಸಿತ್ ಪ್ರಮಾಣಿಕ್ ಸಹ ಅಭಿಯಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ರೈಲ್ವೇಸ್, ನೆಹರು ಯುವ ಕೇಂದ್ರ ಸಂಘಟನೆ (ಎನ್ವೈಕೆಎಸ್), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಹ ಭಾಗವಹಿಸಲಿವೆ.
मैं भारत की स्वतंत्रता के 75 वर्ष-
'आजादी का अमृत महोत्सव' के उपलक्ष्य में ‘फिट इंडिया फ्रीडम रन 2.0' में हिस्सा लेने का संकल्प लेता/लेती हूँ..#AzadiKaAmritMahotsav #Run4India@Nyksindia @IndiaSports @FitIndiaOff pic.twitter.com/gql1E4117j— Anurag Thakur (@ianuragthakur) August 13, 2021