ಪಂಚರಾಜ್ಯ ಚುನಾವಣೆ | ರಾಜಿನಾಮೆಗೆ ಮುಂದಾದ ಕಾಂಗ್ರೆಸ್ ನಾಯಕರು – Saaksha Tv
ನವದೆಹಲಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡ ಬೆನ್ನಲ್ಲೆ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಐದು ರಾಜ್ಯಗಳ ಕಾಂಗ್ರೆಸ್ ಮುಖ್ಯಸ್ಥರನ್ನು ವಜಾಗೊಳಿಸಲು ನಿರ್ಧರಿಸಿದ್ದಾರೆ.
ಪಂಚರಾಜ್ಯಗಳಲ್ಲಿ ಸೋಲಿನ ಕುರಿತು ಆತ್ಮಾವಲೋಕನ ಮಾಡಿಕೊಳ್ಳಲು ಕಳೆದ ಭಾನುವಾರ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಸಲಾಗಿತ್ತು. ಈ ವೇಳೆ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಸೋಲು ಕಂಡಿರುವ ಐದು ರಾಜ್ಯಗಳ ಕಾಂಗ್ರೆಸ್ ಮುಖ್ಯಸ್ಥರನ್ನ ವಜಾಗೊಳಿಸಲು ನಿರ್ಧರಿಸಲಾಗಿದೆ.
ರಾಜ್ಯ ಘಟಕದ ಮುಖ್ಯಸ್ಥರಾದ ನವಜೋತ್ ಸಿಂಗ್ ಸಿಧು (ಪಂಜಾಬ್), ಗಣೇಶ್ ಗೋಡಿಯಾಲ್ (ಉತ್ತರಾಖಂಡ), ಗಿರೀಶ್ ಚೋಡಂಕರ್ (ಗೋವಾ), ಅಜಯ್ ಕುಮಾರ್ ಲಲ್ಲು (ಯುಪಿ) ಮತ್ತು ನಮೀರ್ಕಪಂ ಲೋಕೇನ್ ಸಿಂಗ್ (ಮಣಿಪುರ) ಅವರು ರಾಜೀನಾಮೆ ನೀಡಲಿದ್ದಾರೆ.
Congress President, Smt. Sonia Gandhi has asked the PCC Presidents of Uttar Pradesh, Uttarakhand, Punjab, Goa & Manipur to put in their resignations in order to facilitate reorganisation of PCC’s.
— Randeep Singh Surjewala (@rssurjewala) March 15, 2022
ಉತ್ತರಾಖಂಡ ಕಾಂಗ್ರೆಸ್ ಮುಖ್ಯಸ್ಥ ಗಣೇಶ್ ಗೋಡಿಯಾಲ್ ಅವರು “ಚುನಾವಣೆ ಫಲಿತಾಂಶದ ದಿನದಂದು ನಾನು ರಾಜೀನಾಮೆ ನೀಡಲು ನಿರ್ಧರಿಸಿದ್ದೆ, ಆದರೆ ಹೈಕಮಾಂಡ್ ನಿರ್ದೇಶನಕ್ಕಾಗಿ ಕಾಯುತ್ತಿದ್ದೆ” ಎಂದು ಟ್ವೀಟ್ ಮಾಡಿದ್ದಾರೆ.
ಪಂಜಾಬ್ನಲ್ಲಿ ಅಧಿಕಾರ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ವಿರುದ್ಧ ಹೀನಾಯ ಸೋಲು ಕಂಡಿದ್ದು, ಕೇವಲ 18 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿದೆ. ಉಳಿದಂತೆ ಅತಿದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಕೇವಲ 2 ಸ್ಥಾನ, ಗೋವಾದಲ್ಲಿ 11, ಉತ್ತರಾಖಂಡದಲ್ಲಿ 19, ಮಣಿಪುರದಲ್ಲಿ 5 ಸ್ಥಾನಗಳಲ್ಲಿ ಮಾತ್ರ ಗೆದ್ದಿದೆ.