ರಾಮನಗರ: ಸಾರಿಗೆ ಬಸ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಹತ್ತಿರ ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ ಎದು ತಿಳಿದು ಬಂದಿದೆ. ಅಲ್ಲದೇ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರಿನಲ್ಲಿದ್ದವರು ಮಹದೇಶ್ವರ ಬೆಟ್ಟದಿಂದ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿದ್ದು, ಕ್ರೇನ್ ಸಹಾಯದಿಂದ ಗಾಯಾಳುಗಳ ರಕ್ಷಣೆ ಮಾಡಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.