ಮಧ್ಯಪ್ರದೇಶ : ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಖರ್ಗಾಪುರದಲ್ಲಿ ನಡೆದಿದೆ. ಮೃತರನ್ನು ಧರ್ಮದಾಸ್ ಸೋನಿ (62), ಪುಣೆ ಸೋನಿ (55), ಮನೋಹರ್ ಸೋನಿ (27), ಸೋನಮ್ ಸೋನಿ (25) ಹಾಗೂ ಸಾನಿಧ್ (4) ಎಂದು ಗುರುತಿಸಲಾಗಿದೆ. ಟಿಕಮ್‍ಗರ್ ನ ಖರ್ಗಾಪುರ ನಗರದ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಐವರ ಮೃತದೇಹಗಳು ಪತ್ತೆಯಾಗಿವೆ.
ಇನ್ನು ಇವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಖರ್ಗಾಪುರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.