ತುಮಕೂರು: ಸಾಲಕ್ಕೆ ನೊಂದು ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಸದಾಶಿವನಗರದಲ್ಲಿ ನಡೆದಿದೆ. ಸಾವನ್ನಪ್ಪಿದವರು ಮೂಲತಃ ಶಿರಾ ತಾಲೂಕಿನ ಲಕ್ಕನಹಳ್ಳಿಯವರು ಎನ್ನಲಾಗಿದೆ. ಪತಿ-ಪತ್ನಿ ಹಾಗೂ ಮೂವರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗರೀಬ್ ಸಾಬ್, ಪತ್ನಿ ಸುಮಯಾ, ಮಗಳು ಹಜೀನಾ, ಮೊಹ್ಮದ್ ಶಬೀರ್, ಮೊಹಮದ್ ಮುನೀರ್ ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದ್ದು, ಇವರೆಲ್ಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಗರೀಬ್ ಸಾಬ್ ಕಬಾಬ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಇವರೆಲಗೆ ಶರಣಾದವರು. ಮೃತರು ಶಿರಾ ತಾಲ್ಲೂಕು ಲಕ್ಕನಹಳ್ಳಿಯವರು. ಡೆತ್‌ನೋಟ್ ಬರೆದಿಟ್ಟು ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.