ಚೆನ್ನೈ: ಸ್ನಾನಕ್ಕೆಂದು ತೆರಳಿದ್ದ ಐವರು ಪುರೋಹಿತರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಪಂಗುಣಿ (Panguni) ಆಚರಣೆಯ ಹಿನ್ನೆಲೆಯಲ್ಲಿ ತಮಿಳುನಾಡಿನ (Tamil Nadu) ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಸ್ಥಾನದ ಹತ್ತಿರ ಸ್ನಾನಕ್ಕೆಂದು ತೆರಳಿದ್ದಾಗ ಈ ಘಟನೆ ನಡೆದಿದೆ.
ಮೃತಪಟ್ಟವರನ್ನು ಸೂರ್ಯ (24), ರಾಘವನ್ (22), ಯೋಗೇಶ್ವರನ್ (23), ರಾಘವನ್ (18) ಹಾಗೂ ವನೇಶ್ (20) ಎಂದು ಗುರುತಿಸಲಾಗಿದೆ. ಪಂಗುಣಿ ಆಚರಣೆಯ ಅಂಗವಾಗಿ ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಾಸ್ಥಾನದ ಪುರೋಹಿತರು ಸ್ನಾನಕ್ಕೆಂದು ಮೂವರಸಂಪೇಟ್ ದೇವಸ್ಥಾನದ ಬಳಿಯಿದ್ದ ಕಲ್ಯಾಣಿಗೆ ತೆರಳಿದ್ದರು.
ಈ ಸಂದರ್ಭದಲ್ಲಿ ಓರ್ವ ಪುರೋಹಿತರು ಕಾಲು ಜಾರಿ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋಗಿ ಇನ್ನುಳಿದವರು ಸಾವನ್ನಪ್ಪಿದ್ದಾರೆ. ಎಲ್ಲಾ ಶವಗಳನ್ನು ನೀರಿನಿಂದ ಹೊರತೆಗೆದಿದ್ದು, ಈ ಕುರಿತು ತನಿಖೆ ಕೈಗೊಂಡಿದ್ದೇವೆ ಎಂದು ಚೆನ್ನೈ (Chennai) ಪೊಲೀಸ್ ಕಮಿಷನರ್ ಶಂಕರ್ ಜಿವಾಲ್ ಹೇಳಿಕೆ ನೀಡಿದ್ದಾರೆ. ಸಾವನ್ನಪ್ಪಿದವರು ಬೇರೆ ಬೇರೆ ಸ್ಥಳಗಳಿಗೆ ಸೇರಿದ್ದವರಾಗಿದ್ದಾರೆ. ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಶೋಧ ಕಾರ್ಯ ನಡೆಸಿದ್ದಾರೆ.
ಮೃತಪಟ್ಟ ಐವರೂ 18ರಿಂದ 23 ವರ್ಷದ ಯುವಕರಾಗಿದ್ದು, ಮೃತರ ಕುಟುಂಬಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (M.K.Stalin) ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.








