ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ನಡೆದಿದೆ.
ಚಳ್ಳಕೆರೆ (Challakere) ಗೇಟ್ ಹತ್ತಿರ ಜೈಲ್ ರಸ್ತೆಯಲ್ಲಿನ ಪಾಳುಬಿದ್ದ ಮನೆಯಲ್ಲಿಯೇ ಪತ್ತೆಯಾಗಿವೆ. ಈ ಕುರಿತು ಪವನ್ ಕುಮಾರ್ ಎಂಬುವವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಮನೆಯಲ್ಲಿ ಪವನ್ ಕುಮಾರ್ ಸಂಬಂಧಿ ಜಗನ್ನಾಥರೆಡ್ಡಿ ಹಾಗೂ ಕುಟುಂಬಸ್ಥರು ವಾಸಿಸುತ್ತಿದ್ದರು. ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ, ನರೇಂದ್ರರೆಡ್ಡಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಸದ್ಯ ಈ ಮಾಹಿತಿ ಆಧರಿಸಿ ಪೊಲೀಸರು ಪರಿಶೀಲನೆ ನಡೆಸಿದಾಗ ಈ ಅಸ್ಥಿಪಂಜರಗಳು ಪತ್ತೆಯಾಗಿವೆ. ಸ್ಥಳಕ್ಕೆ ಡಿವೈಎಸ್‌ಪಿ ಪಿ.ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಕೊಲೆಯಾ? ಅಥವಾ ಆತ್ಮಹತ್ಯೆಯಾ? ಎಂಬುವುದು ತನಿಖೆಯಿಂದ ತಿಳಿದು ಬರಲಿದೆ. ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಕಳುಹಿಸಲು ನಿರ್ಧರಿಸಲಾಗಿದೆ.