ಕೊಲ್ಕತ್ತಾದಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಮಹತ್ವದ ನಿರ್ಧಾರವನ್ನ ಕೈಗೊಳ್ಲಲಾಗಿದೆ. ಈಗಾಗಲೇ ಕೊಲ್ಕತ್ತಾದಲ್ಲಿ ಕೊರೊನಾ ಹಾಟ್ ಸ್ಪಾಟ್ ಆಗಿರುವ ಕಡೆಗಳಿಗೆ ವಿಮಾನ ಸೇವೆ ಸಂಪೂರ್ಣವಾಗಿ ಬಂದ್ ಆಗಿದ್ದು, ಈ ಅವಧಿಯನ್ನು ಜುಲೈ ೩೧ರವರೆಗೂ ವಿಸ್ತರಣೆ ಮಾಡಲಾಗಿದೆ.
ಸೋಂಕು ಪ್ರಕರಣಗಳು ಹೆಚ್ಚಿದ ಬೆನ್ನಲ್ಲೇ ಪ್ರಮುಖ ಕೊರೊನಾ ಹಾಟ್ ಸ್ಪಾಟ್ ಗಳಾಗಿರುವ ೬ ನಗರಗಳಿಗೆ ವಿಮಾನ ಸೇವೆ ರದ್ದುಗೊಳಿಸಲಾಗಿದೆ. ದೆಹಲಿ , ಮುಂಬೈ, ಪುಣೆ, ನಾಗ್‌ಪುರ, chennai ಹಾಗೂ ಅಹಮದಾಬಾದ್ ಗೆ ವಿಮಾನ ಸೇವೆ ಸ್ಥಗಿತಗೊಳಿಸುವಂತೆ ಪಶ್ಚಿಮ ಬಂಗಾಳದ ಪ್ರಧಾನ ಕಾರ್ಯದರ್ಶಿ ರಾಜೀವ್ ಸಿನ್ಹಾ ಅವರು ಕೇಂದ್ರ ನಾಗರೀಕ ವಿಮಾನಯಾನ ಕಾರ್ಯದರ್ಶಿ ಪ್ರದೀಪ್ ಸಿಂಗ್ ಕೋಲಾರ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು. ರಾಜ್ಯ ಸರ್ಕಾರದ ಮನವಿಯ ಮೇರೆಗೆ ಇದೀಗ ೬ ನಗರಗಳಿಗೆ ವಿಮಾನ ಸೇವೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ಜುಲೈ ೩೧ರವೆಗೂ ಬಂದ್ ಆಗಿರಲಿದೆ.