ಯಾದಗಿರಿಯ ಕೃಷ್ಣಾ ನದಿಯಲ್ಲಿ ಪ್ರವಾಹ : ರಸ್ತೆ ಸಂಪರ್ಕ ಕಡಿತ Yadagiri
ಯಾದಗಿರಿ : ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಬಸವಸಾಗರ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.
ಇದರಿಂದ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದ್ದು, ಯಾದಗಿರಿಯ ಕೃಷ್ಣಾ ನದಿಯಲ್ಲಿ ಪ್ರವಾಹ ಉಂಟಾಗಿದೆ.
ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಸವಸಾಗರ ಜಲಾಶಯ ಭರ್ತಿಯಾಗಿದೆ.
ಈ ಹಿನ್ನೆಲೆಯಲ್ಲಿ 3.10 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ. ಇದರಿಂದ ಎಂ ಕೊಳ್ಳೂರು ಬ್ರಿಡ್ಜ್ ಜಲಾವೃತಗೊಂಡು ರಾಯಚೂರು, ಯಾದಗಿರಿ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಮತ್ತೊಂದೆಡೆ ನದಿ ಉಕ್ಕಿ ಹರಿಯುತ್ತಿರುವುದರಿಂದ ನದಿ ತೀರದ ಜಮೀನುಗಳಿಗೆ ನೀರು ನುಗ್ಗಿದ್ದು, ಪರಿಣಾಮ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.