ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ
ಬೆಳಗಾವಿ : ನೆರೆಯ ಮಹಾರಾಷ್ಟ್ರದಲ್ಲೂ ಕೂಡ ಭಾರಿ ಮಳೆಯಾಗುತ್ತಿದ್ದು, ಕೊಯ್ನಾ ಜಲಾಶಯ ಮತ್ತು ಬೇರೆ ಬೇರೆ ಜಲಾಶಯಗಳಿಂದ ನೀರನ್ನು ರಾಜ್ಯಕ್ಕೆ ಹರಿದು ಬಿಟ್ಟಿದ್ದಾರೆ. ಹಾಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ವೇದಗಂಗಾ ನದಿಗೆ ನೀರು ಹರಿಬಿಟ್ಟಿರುವುದರಿಂದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೋಡಣಿ ಗ್ರಾಮದಲ್ಲಿ 300ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದೆ.
600ಕ್ಕೂ ಹೆಚ್ಚು ಜನರಿರುವ ಈ ಗ್ರಾಮದಲ್ಲಿ ಎಲ್ಲ ಮನೆಗಳಿಗೂ ನೀರು ನುಗ್ಗಿ ಜನರ ಪರಿಸ್ಥಿತಿ ಅಸ್ತವ್ಯಸ್ಥಗೊಂಡಿದೆ. ಹಾಗಾಗಿ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕೆಲಸ ಮುಂದುವರಿದಿದೆ.
ಇದಲ್ಲದೆ ಜಿಲ್ಲೆಯ ಹಲವು ನದಿಪಾತ್ರದ ಹಳ್ಳಿಗಳು ನೀರಿನಲ್ಲಿ ಮುಳುಗಡೆಯಾಗಿದೆ. ಹಾಗಾಗಿ ಜಿಲ್ಲೆಗೆ ಎಸ್ ಡಿಆರ್ ಎಫ್ ತಂಡ ಧಾವಿಸಿದೆ. ಎಸ್ ಡಿಆರ್ ಎಫ್ ನ 20ಕ್ಕೂ ಹೆಚ್ಚು ಸಿಬ್ಬಂದಿ ಈಗಾಗಲೇ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿವೆ.










