ಬೆಂಗಳೂರು: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ ಉತ್ತರ ಕರ್ನಾಟಕ ಜೀವನಾಡಿ ಕೃಷ್ಣಾ ನದಿಯಲ್ಲಿ ಮತ್ತೆ ನೆರೆ ಭೀತಿ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರಕ್ಕೆ ಭೇಟಿ ನೀಡಿ ಅಲ್ಲಿನ ನೀರಾವರಿ ಸಚಿವ ಜಯಂತ್ ಪಾಟೀಲ್ ಜೊತೆ ಮುಂಬೈನಲ್ಲಿ ಸಭೆ ನಡೆಸಿದ್ದಾರೆ.
ಒಂದು ವೇಳೆ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಎದುರಾದರೆ ಮುನ್ನೆಚ್ಚರಿಕೆಗೆ ಸಂಬಂಧಿಸಿದಂತೆ ಕೈಗೊಳ್ಳಬಹುದಾದ ಕಾರ್ಯಗಳ ಕುರಿತು ಸಮಗ್ರ ಚರ್ಚೆ ನಡೆಸಿದ್ದಾರೆ.
ಜತೆಗೆ ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣಕ್ಕೆ ಸಮನ್ವಯ ಸಮಿತಿ ರಚನೆ ಹಾಗೂ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ವಿನಿಮಯಕ್ಕೆ ಸಂಬಂಧಿಸಿದಂತೆ ಉಭಯ ಸಚಿವರು ಸಮಾಲೋಚನೆ ನಡೆಸಿದರು. ವಿಶೇಷವಾಗಿ ನೆರೆ ಹಾವಳಿಯನ್ನು ನಿಯಂತ್ರಿಸಲು ಸಮನ್ವಯ ಸಮಿತಿ ರಚಿಸಬೇಕು ಎಂಬ ಮಹಾರಾಷ್ಟ್ರ ಸರ್ಕಾರದ ಪ್ರಸ್ತಾವನೆಗೆ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.
ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ. ಅಲ್ಲದೆ ಕೃಷ್ಣಾ ನದಿ ನೀರು ಬಳಕೆಗೆ ಸಂಬಂಧಿಸಿದಂತೆ ನ್ಯಾಯಾಧೀಕರಣದ ತೀರ್ಪನ್ನು ಕೇಂದ್ರ ಸರ್ಕಾರ ಇದುವರೆಗೆ ಗೆಜೆಟ್ ನಲ್ಲಿ ಪ್ರಕಟಿಸಿಲ್ಲ. ಇದರಿಂದಾಗಿ ಸದ್ಯಕ್ಕೆ ನೀರು ಬಳಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ನ್ಯಾಯಾಧೀಕರಣದ ತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಉಭಯ ರಾಜ್ಯಗಳು ಈ ವೇಳೆ ತೀರ್ಮಾನಿಸಿವೆ.
ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?
1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....








