flower show – ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಲಾಲ್ ಭಾಗ್ ಫಲಪುಷ್ಪ ಪ್ರದರ್ಶನ…
ದಿವಂಗತ ನಟ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಈ ಭಾರಿ ಬೆಂಗಳೂರಿನ ಪ್ರಖ್ಯಾತ ಲಾಲ್ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುವುದು ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ. ಆಗಸ್ಟ್ 5 ರಿಂದ 15 ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಆಗಸ್ಟ್ 5ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ವಿಕಾಸಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ತೋಟಗಾರಿಕಾ ಸಚಿವರು “ಈ ಬಾರಿಯ ಪುಷ್ಪ ಪ್ರದರ್ಶನಕ್ಕೆ ನಟ ದಿ.ಪುನೀತ್ ರಾಜ್ ಕುಮಾರ್ ಹೆಸರಿನ್ನಿಡಲಾಗುತ್ತಿದೆ. ಈ ಬಾರಿಯ ಫ್ಲವರ್ ಶೋಗೆ ವಿದೇಶಗಳಿಂದಲೂ ಹೂವುಗಳನ್ನು ತರಿಸಲಾಗಿದೆ. “ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಪುಷ್ಪ ಪ್ರದರ್ಶನ ನಡೆಯಲಿದೆ. ಆಗಸ್ಟ್ 15ರ ಬಳಿಕ ಒಂದೆರಡು ದಿನಗಳ ಕಾಲ ಮುಂದುವರಿಸುವ ಬಗ್ಗೆ ಚರ್ಚೆ ನಡೆದಿದೆ ಎಂದರು.
ಈ ಬಾರಿ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ಗಾಜನೂರಿನ ಮನೆ ವಿಶೇಷವಾಗಿದೆ. ಕಳೆದ ಎರಡು ವರ್ಷ ಲಾಲ್ಬಾಗ್ ಫ್ಲವರ್ ಶೋ ಕೋವಿಡ್ನಿಂದ ಮಾಡಿರಲಿಲ್ಲ. ಆದರೆ ಈ ಬಾರಿ ಆಗಸ್ಟ್ 15ರಂದು ಹಿಂದೆ ಮಾಡುತ್ತಿದ್ದಕ್ಕಿಂತ ಹೆಚ್ಚಾಗಿ ಮಾಡುತ್ತಿದ್ದೇವೆ ಎಂದು ಹೇಳಿದರು. flower show – Lal Bhag flower flower show in the name of Puneeth Rajkumar…