ಬಸವ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿದ ಅಮಿತ್ ಶಾ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವ ಪುತ್ಥಳಿ ಆವರಣದಲ್ಲಿದ್ದ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಇಂದು ಜಗಜ್ಯೋತಿ ಬಸವೇಶ್ವರರ 899ನೇ ಜನಯಂತ್ಯೋತ್ಸವ ಹಿನ್ನಲೆಯಲ್ಲಿ ಸವ ಸಮಿತಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಿ ಬಸವ ಪುತ್ತಳಿಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಅಮಿತ್ ಶಾ ಅವರಿಗೆ ಬಸವಣ್ಣನ ಪುತ್ಥಳಿ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವ ಸಲ್ಲಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗು ಇತರರು ಈ ವೇಳೆ ಉಪಸ್ಥಿತರಿದ್ದರು.
ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ಜಮಾವಣೆಗೊಂಡಿದ್ದರು. ಪಕ್ಷದ ಧ್ವಜ ಹಿಡಿದು ಜಯಘೋಷಗಳನ್ನು ಮೊಳಗಿಸಿದರು. ಕಾರ್ಯಕರ್ತರಿಗೆ ನಿರಾಶೆ ಮಾಡದ ಅಮಿತ್ ಶಾ ಕಾರ್ಯಕರ್ತರು ಜಮಾಯಿಸಿದ್ದ ಸ್ಥಳಕ್ಕೆ ಮುಖಂಡರ ಜೊತೆ ತೆರಳಿ ಕೈಬೀಸಿದರು.