ವಾಷಿಂಗ್ಟನ್, ಜೂನ್ 8: ಅಮೆರಿಕದಲ್ಲಿ ಬಿಳಿ ವರ್ಣೀಯ ಪೊಲೀಸ್ ಅಧಿಕಾರಿಯಿಂದ ನಡೆದ ಕಪ್ಪು ವರ್ಣೀಯ ಜಾರ್ಜ್ ಫ್ಲೋಯ್ಜ್ ಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟಿಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
ವಾಷಿಂಗ್ಟನ್ ನ ಸೀಟಲ್ ನಲ್ಲಿ ಪ್ರತಿಭಟನಾಕಾರರು ಕಪ್ಪು ವರ್ಣೀಯ ಜಾರ್ಜ್ ಫ್ಲೋಯ್ಜ್ ಹತ್ಯೆಯನ್ನು ಖಂಡಿಸಿ ಪ್ರತಿಭಟಿಸುತ್ತಿದ್ದರು. ಆಗ ವ್ಯಕ್ತಿಯೊಬ್ಬ ಪ್ರತಿಭಟನಾಕಾರರ ಬಳಿ ಕಾರು ಚಲಾಯಿಸಿಕೊಂಡು ಬಂದಿದ್ದು, ನಂತರ ಗುಂಡಿನ ದಾಳಿ ನಡೆಸಿದ್ದಾನೆ
ಕಾರು ಚಲಾಯಿಸಿಕೊಂಡು ಬಂದ ವ್ಯಕ್ತಿ ಸ್ಥಳದಲ್ಲಿದ್ದ ಬ್ಯಾರಿಕೇಡ್’ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಕಾರಿನಿಂದ ಇಳಿದು ಪಿಸ್ತೂಲ್ ತೆಗೆದುಕೊಂಡು ಪ್ರತಿಭಟನಾಕಾರರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾನೆ. ಘಟನೆಯಲ್ಲಿ ವ್ಯಕ್ತಿಯೊಬ್ಬ ಗಾಯಗೊಂಡಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಆರೋಗ್ಯ ಸ್ಥಿರವಾಗಿರುವುದಾಗಿ ಸೀಟಲ್ ಅಗ್ನಿ ಶಾಮಕದಳದ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ.








